ಪ್ರಚೋದನಕಾರಿ ಭಾಷಣ: ಮುತಾಲಿಕ್ ವಿರುದ್ಧ ಪ್ರಕರಣ

0
28

ಹುಬ್ಬಳ್ಳಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಹತ್ತಿರದ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ವಿರುದ್ಧ ನಗರದ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ. ೨೧ರಂದು ಬೆಳಗ್ಗೆ ೧೧.೪೫ರ ಸುಮಾರಿಗೆ ರಾಣಿ ಚನ್ನಮ್ಮ ಮೈದಾನದಲ್ಲಿ ಗಣೇಶಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ಆಗಮಿಸಿದ್ದ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರು ಇತರ ಧರ್ಮದ ಭಾವನೆಗಳಿಗೆ ಅಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಆಧಾರದ ಮೇಲೆ ಮಹಾನಗರ ಪಾಲಿಕೆಯ ವಲಯ ಕಚೇರಿ ೮ರ ಸಹಾಯಕ ಆಯುಕ್ತರು ದೂರು ನೀಡಿದ್ದಾರೆ.

Previous articleಮೂವರು ಪೇದೆ ಸೇರಿ 15 ಜನರ ವಿರುದ್ಧ ದೂರು
Next articleಮುತಾಲಿಕ್ ಬಂಧನಕ್ಕೆ ಅಂಜುಮನ್ ಸಂಸ್ಥೆ ಆಗ್ರಹ