ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ತಂಡ ರಚನೆ

0
13

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್‌ಡ್ರೈವ್ ಸಿಕ್ಕಿರುವ ಪ್ರಕರಣ ಕುರಿತಂತೆ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ 3 ಎಸ್‌ಪಿ, 4 ಡಿವೈಎಸ್‌ಪಿ ಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಾಜ್ಯ ಸರ್ಕಾರ ರಚಿಸಿದೆ.
ಈ ಕುರಿತಂತೆ ಮಾತನಾಡಿರುವ ಗೃಹ ಸಚಿವ ಡಾ ಜಿ. ಪರಮೇಶ್ವರ್, ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಎಸ್‌ಐಟಿ ತಂಡ ರಚಿಸಲಾಗಿದೆ. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಇದ್ದು ಅವರಿಗೆ ನೊಟೀಸ್ ನೀಡಿ ಕರೆಸಿ ತನಿಖೆ ಮಾಡುವ ಬಗ್ಗೆ ಹಿರಿಯ ಪೊಲೀಸ್ ತನಿಖಾಧಿಕಾರಿಗಳೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

Previous articleಯುಪಿಎ ಸರ್ಕಾರದಿಂದ ಕನ್ನಡಿಗರ ಕೈಗೆ ಚಿಪ್ಪು
Next articleಉಪ್ಪು ತಿಂದವನು ನೀರು ಕುಡಿಯಲೇಬೇಕು