ಪ್ರಧಾನಮಂತ್ರಿಗೆ ಬೀಳ್ಕೊಡುಗೆ

0
34

ಕಲಬುರಗಿ: ಮಹಾರಾಷ್ಟ್ರದ ಸೋಲಾಪುರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಗಳೂರಿಗೆ ಪ್ರಯಾಣಿಸಲು ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಮಧ್ಯಾಹ್ನ ಒಂದು ಗಂಟೆಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ಶಿಷ್ಟಾಚಾರದಂತೆ ಬೀಳ್ಕೊಡಲಾಯಿತು.
ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ‌ ಡಾ. ಉಮೇಶ ಜಾಧವ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಅವರು ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಅನೇಕ ಮುಖಂಡರು ಇದ್ದರು.

Previous articleಹೆಂಡತಿ ಮಾತು ಕೇಳದ ಗಂಡಿಗೆ ಜಯವಿಲ್ಲ
Next articleವಿಶ್ವದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣ ಇಂದು