ಕೊಲೊಂಬೊ: ಪ್ರಧಾನಿ ನರೇಂದ್ರ ಮೋದಿಯವರಿಗೆ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ‘ಮಿತ್ರ ವಿಭೂಷಣ’ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಶ್ರೀಲಂಕಾ ಸರ್ಕಾರವು ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧ ಹೊಂದಿರುವ ದೇಶಗಳ ಮುಖ್ಯಸ್ಥರಿಗೆ ಈ ಗೌರವವನ್ನು ನೀಡಲಾಗುತ್ತಿದ್ದು, ಭಾರತವು ಐತಿಹಾಸಿಕವಾಗಿ ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ. ಅಲ್ಲದೆ, ಶ್ರೀಲಂಕಾ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾಗ, ಸಹಾಯಹಸ್ತ ಚಾಚಿದ ಮೊದಲ ದೇಶ ಭಾರತವಾಗಿತ್ತು. ಈಗ ಈ ಉತ್ತಮ ಸಂಬಂಧಗಳನ್ನು ಗುರುತಿಸಿ, ಶ್ರೀಲಂಕಾ ಸರ್ಕಾರ ಪ್ರಧಾನಿ ಮೋದಿಯವರಿಗೆ ಈ ಗೌರವವನ್ನು ನೀಡಿದೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಭಾರತದ 140 ಕೋಟಿ ದೇಶವಾಸಿಗಳಿಂದ ಬಂದ ಗೌರವ ಎಂದು ಮೋದಿ ಬಣ್ಣಿಸಿದ್ದಾರೆ. ಕಳೆದ ವರ್ಷ ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸಾ ನಾಯಕೆ ಅಧಿಕಾರ ವಹಿಸಿಕೊಂಡ ನಂತರ ಇದು ಪ್ರಧಾನಿ ಮೋದಿಯವರ ಮೊದಲ ಭೇಟಿಯಾಗಿದೆ.