SK Home Ad
Home ತಾಜಾ ಸುದ್ದಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

0
118

ನವದೆಹಲಿ: ವಯನಾಡ್ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದಿದ್ದರು. ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್‌ನ ಸಂಸದೆಯಾಗಿದ್ದಾರೆ. ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು. ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನವನ್ನು ತಲುಪಿದ್ದಾರೆ.ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿದ್ದರು. ಇದರೊಂದಿಗೆ ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ.