ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್

0
6
ಗನ್

ಉಡುಪಿ: ಇಲ್ಲಿನ ಬನ್ನಂಜೆ ಜಯಲಕ್ಷ್ಮಿ ಸಿಲ್ಕ್ಸ್ ವಸ್ತ್ರ ಮಳಿಗೆಯಲ್ಲಿ ಮಿಸ್‌ ಫೈರಿಂಗ್ ಆಗಿ ಓರ್ವ ವ್ಯಕ್ತಿಗೆ ಗುಂಡು ತಗುಲಿದೆ. ಗುಂಡೇಟು ತಗುಲಿದ ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್‌ ಪತ್ತೆಯಾಗಿದ್ದು, ಅದನ್ನು ಆಪರೇಟ್ ಮಾಡಿ ಪರೀಕ್ಷಿಸಲು ಸಿಬ್ಬಂದಿ ಮುಂದಾಗಿದ್ದಾಗ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡೇಟು ತಗುಲಿತ್ತು.
ಈ ಹಿಂದೆಯೂ ಭೂಗತ ಪಾತಕಿಗಳಿಂದ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ಫೈರಿಂಗ್ ನಡೆದಿತ್ತು.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್​ನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ‌

Previous articleರಾಮ ಮಂದಿರದ ಬಳಿ ವಾಲ್ಮೀಕಿ ಮಂದಿರ ನಿರ್ಮಿಸಿ
Next articleಗ್ಯಾರಂಟಿಯಿಂದಾಗಿ ಬರಗಾಲದಲ್ಲೂ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ