ಬೆಂಗಳೂರು: ಬರ ಪರಿಹಾರದ ವಿಚಾರವಾಗಿ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ಮಾಡಿರುವ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಪ್ರತಿಭಟನೆಗೆ ಅವಕಾಶ ಮಾಡಿಕೊಟ್ಟ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ವಿರುದ್ಧವೂ ಬಿಜೆಪಿ ದೂರು ನೀಡಿದ್ದು, ಅವರನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿದೆ. ಬರ ಪರಿಹಾರದ ವಿಚಾರ ಮಂದಿಟ್ಟುಕೊಂಡು ವಿಧಾನಸೌಧ ಆವರಣದ ಗಾಂಧಿ ಪ್ರತಿ ಬಳಿ ಕಾಂಗ್ರೆಸ್ ನಾಯಕರಿಗೆ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟ ರಾಜ್ಯ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಾಗೂ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ.


























