ಗರ್ಭಿಣಿಯರ ಸಾವು ಪ್ರಕರಣ : ಸಂಜೆ ಸಿಎಂ ನೇತೃತ್ವದಲ್ಲಿ ಸಭೆ

0
33
ಲಕ್ಷ್ಮೀ

ಉಡುಪಿ: ಗರ್ಭಿಣಿಯರ ಸಾವು ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಜಿಲ್ಲೆಯ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಳ್ಳಾರಿ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಲ್ಲಿ ಸಂಭವಿಸಿದ ಗರ್ಭಿಣಿಯರ ಸಾವು ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ, ಈ ವಿಷಯದ ಕುರಿತು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಾನು ಮತ್ತು ದಿನೇಶ್ ಗುಂಡೂರಾವ್ ಸತತ ಸಂಪರ್ಕದಲ್ಲಿದ್ದೇವೆ. ಭೇಟಿ ಕೊಟ್ಟಿಲ್ಲ ಎಂದರೆ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದ್ದೇವೆ ಎಂದಲ್ಲ. ಸಭೆಐಲ್ಲಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Previous articleತಂದೆ ಕೊಲೆ ಮಾಡಿದ ಮಗ, ಸೊಸೆ ಬಂಧನ
Next articleರೋಮ್‌ನ ಕ್ರೈಸ್ತ ಸಂಘಟನೆಗಳಿಂದ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಸನ್ಮಾನ