ಬಳ್ಳಾರಿ ಶಾಸಕ ನಾರಾ ಭರತ್‌ ರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ ದಾಳಿ

0
19

ಬಳ್ಳಾರಿ : ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಮನೆ, ಕಚೇರಿಗಳ ಮೇಲೆ ನಿರ್ದೇಶನಾಲಯ ಅಧಿಕಾರಿಗಳು ಶನಿವಾರ ಮುಂಜಾನೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಇದರ ಜತೆಗೇ, ಸಂಬಂಧಿಗಳ ಮನೆಗಳು, ಕಚೇರಿಗಳಲ್ಲೂ ಶೋಧ ನಡೆಯುತ್ತಿದೆ. ಬೆಂಗಳೂರು, ಚೆನ್ನೈನಲ್ಲಿರುವ ಕಚೇರಿಗಳ ಮೇಲೂ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಶಾಸಕರ ಬೆಂಗಳೂರು ಹಾಗೂ ಚೆನ್ನೈನ ಕಚೇರಿಗಳ ಮೇಲೂ ದಾಳಿ ನಡೆದಿದೆ ಎನ್ನಲಾಗಿದೆ. ಶಾಸಕ ಭರತ್‌ ರೆಡ್ಡಿ ಅವರ ಕುಟುಂಬ ಗ್ರಾನೈಟ್‌ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಆಂಧ್ರ ಪ್ರದೇಶದ ಒಂಗೋಲ್‌ಗಳಲ್ಲಿ ಕ್ವಾರಿಗಳನ್ನು ಹೊಂದಿದೆ. ಬೆಂಗಳೂರಿನಿಂದ 7 ವಾಹನಗಳಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಸಿಆರ್ ಪಿಎಫ್ ಭದ್ರತಾ ಸಿಬ್ಬಂದಿಗಳೊಂದಿಗೆ ಆಗಮಿಸಿ ದಾಳಿ ಮಾಡಿದ್ದಾರೆ.

Previous articleಜಸ್ಟ್‌ಪಾಸ್ ಆದವರ ಫಸ್ಟ್‌ಕ್ಲಾಸ್ ಚಿತ್ರ
Next articleಮಿಥುನ್ ಚಕ್ರವರ್ತಿಗೆ ಎದೆನೋವು: ಆಸ್ಪತ್ರೆಗೆ ದಾಖಲು