ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ

0
37

ಬೆಂಗಳೂರು: ಬಸವಣ್ಣನಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

Previous articleಕೊಲ್ಕತ್ತಾ ಹೋಟೆಲ್‌ನಲ್ಲಿ ಅಗ್ನಿ ಅವಘಡ: 14 ಮಂದಿ ಸಜೀವ ದಹನ
Next articleಸಿಐಎಸ್​ಸಿಇ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ