ಬಸ್‌-ಲಾರಿ ಅಪಘಾತ: ಇಬ್ಬರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

0
12

ಗದಗ: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಮು‌ಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ.
ತಮಿಳುನಾಡು ಮೂಲದ ಲಾರಿ ಚಾಲಕ ವಿನೋದ್ ಕುಮಾರ್(38) ಹಾಗೂ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಕೊಪ್ಪಳದ ಭಾಗ್ಯನಗರದ ನಿವಾಸಿ ಗೀತಾ ಕಲಾಲ್(40) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬಸ್​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆ ಹಾಗೂ ಕೊಪ್ಪಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Previous articleರಾಹುಲ್ ಗಾಂಧಿ ಭಕ್ತಿಯ ಕನ್ನಡಕ ಹಾಕಿದರೆ ಎಲ್ಲೆಡೆ ರಾಮ ಕಾಣಿಸುತ್ತಾನೆ
Next articleಫೆ.೮ ರಂದು ಒಂದು ಸರಳ ಪ್ರೇಮ ಕಥೆ ತೆರೆಗೆ