ಬಸ್​ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

0
17

ವಿಜಯಪುರ: ಖಾಸಗಿ ಬಸ್​ ಹರಿದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ವಿಜಯಪುರ ನಗರದ ಬಸವೇಶ್ವರ ವೃತ್ತದಲ್ಲಿ ಈ ಘಟನೆ ನಡೆದಿದ್ದು. ಮೃತ ವ್ಯಕ್ತಿಯನ್ನು ಅಶೋಕ ಪರ್ಜೆನವರ್ (58) ಎಂದು ಗುರುತಿಸಲಾಗಿದೆ. ಬಸ್​ ಬೆಂಗಳೂರಿನಿಂದ ವಿಜಯಪುರಕ್ಕೆ ಕಡೆಗೆ ಬರುತ್ತಿತ್ತು ಎಂದು ತಿಳಿದುಬಂದಿದೆ. ಖಾಸಗಿ ಬಸನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು
Next articleಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ