ಬಿಎಸ್‌ವೈ ಮನೆ ಮೇಲಿನ ದಾಳಿ ರಾಜಕೀಯ ಪ್ರೇರಿತ

0
17
ಪ್ರಲ್ಹಾದ್ ಜೋಶಿ

ಧಾರವಾಡ: ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಮಾಡಿರುವುದು ರಾಜಕೀಯ ಪ್ರೇರಿತ ಇರಬಹುದು ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಂಡ ಅತ್ಯಂತ ಮುತ್ಸದ್ಧಿ ಹಾಗೂ ಹಿರಿಯ ರಾಜಕಾರಣಿ ಯಡಿಯೂರಪ್ಪ. ಅವರ ಮನೆ ಮೇಲೆ ದಾಳಿ ಮಾಡುವುದು ಸರಿಯಲ್ಲ ಎಂದರು.
ಸದಾಶಿವ ಆಯೋಗದ ವರದಿಯನ್ನು ವಿರೋಧ ಮಾಡುವವರಿಗೆ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿ ಹೇಳಿದ್ದಾರೆ. ಎಲ್ಲರಿಗೂ ಒಪ್ಪುವಂತಹ ರೀತಿಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ. ಈಗ ಮತ್ತೊಮ್ಮೆ ಸಂಬಂಧಿಸಿದವರನ್ನು ಕರೆದು ಎಲ್ಲರಿಗೂ ಅನುಕೂಲವಾಗುವಂತೆ ಮನವರಿಕೆ ಮಾಡುತ್ತಾರೆ. ಈಗಾಗಲೇ ಸದಾಶಿವ ಆಯೋಗದ ವರದಿ ಬಗ್ಗೆ ಅಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಚರ್ಚಿಸಿದ್ದಾರೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದರು.

Previous articleಮಾಡಾಳ್ ವಿರೂಪಾಕ್ಷಪ್ಪ ಬಂಧನ
Next articleಅಂಬರೀಶ್ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ: ಬೊಮ್ಮಾಯಿ‌