`ಬಿಎಸ್‌ವೈರನ್ನು ಕಣ್ಣೀರು ಹಾಕಿಸಿ ಕೆಳಗಿಳಿಸಿದ್ದೇ ಮೋದಿ’

0
23
siddu

ಬೆಳಗಾವಿ: ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರನ್ನು ಕಣ್ಣೀರು ಹಾಕಿಸಿ ಅಧಿಕಾರದಿಂದ ಕೆಳಗಿಳಿಸಿದ್ದೇ ಪ್ರಧಾನಿ ನರೇಂದ್ರ ಮೋದಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿರುವ ಅವರು, ಬಿಜೆಪಿಯ ಮೋದಿ ಮತ್ತು ಅಮಿತ್ ಶಾ ಅವರು, ಯಡಿಯೂರಪ್ಪ ಅಷ್ಟೇ ಅಲ್ಲ ಲಾಲಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅಂಥವರನ್ನು ಬಿಜೆಪಿಯಲ್ಲಿ ಮೂಲೆಗುಂಪು ಮಾಡಿದ್ದನ್ನು ಜನ ಮರೆತಿಲ್ಲ ಎಂದರು. ಅದನ್ನು ಬಿಟ್ಟು ವಿರೇಂದ್ರ ಪಾಟೀಲ ಮತ್ತು ನಿಜಲಿಂಗಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಕಾಂಗ್ರೆಸ್ ಅವಮಾನಿಸಿದೆ ಎಂದು ಸುಳ್ಳು ಹೇಳುತ್ತಿದ್ದಾರೆ.
ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅವರಿಗೆ ಅವಮಾನ ಮಾಡುವ ಪ್ರಶ್ನೆಯೇ ಬರಲ್ಲ. ಬರೀ ಹಸೀ ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆಂದು ಅವರು ವಾಗ್ದಾಳಿ ನಡೆಸಿದರು.

Previous article`ಪ್ರಜಾಧ್ವನಿ’ ಯಾತ್ರೆ ಮುಂದಕ್ಕೆ
Next articleತಾಯಿ, ಮಗಳು ಆತ್ಮಹತ್ಯೆ