ಬಿಜೆಪಿ 200 ಸ್ಥಾನ ಗೆದ್ದರೆ ಹೆಚ್ಚು

0
6

ಬೆಂಗಳೂರು: ತಾವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಮೋದಿಯವರಿಗೆ ಖಚಿತವಾಗಿದೆ. ಆಕ್ಸಿಸ್ ಪ್ರಕಟಿಸಿದ ಖಚಿತವಾದ ಸಮೀಕ್ಷೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಲೀಟ್ ಮಾಡಿಸುತ್ತಿರುವುದಕ್ಕೆ ಸೋಲಿನ ಭಯವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರ ಪರ ಪ್ರಚಾರದ ನಿಮಿತ್ತ ಕೂಡ್ಲಿಗಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ- ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿರುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಡೀ ದೇಶದ ಜನರ ಕೈಗೆ ಚೊಂಬು ಕೊಟ್ಟರು. ಶ್ರೀರಾಮುಲು ಸಚಿವರಾಗಿ, ಸಂಸದರಾಗಿ ಬಳ್ಳಾರಿ ಜಿಲ್ಲೆಗೆ ಚೊಂಬು ಕೊಟ್ಟರು. ಮೋದಿ ಅವರು ಮತ್ತು ಶ್ರೀರಾಮುಲು ಬಳ್ಳಾರಿ ಜನಕ್ಕೆ ಕೊಟ್ಟ ಚೊಂಬನ್ನು ನೀವು ಶ್ರೀರಾಮುಲು ಕೈಗೆ ವಾಪಾಸ್ ಕೊಡಿ. ತಾವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಮೋದಿಯವರಿಗೆ ಖಚಿತವಾಗಿದೆ. ಆಕ್ಸಿಸ್ ಪ್ರಕಟಿಸಿದ ಖಚಿತವಾದ ಸಮೀಕ್ಷೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಲೀಟ್ ಮಾಡಿಸುತ್ತಿರುವುದಕ್ಕೆ ಸೋಲಿನ ಭಯವೇ ಕಾರಣ. ಬಿಜೆಪಿ 200 ಸ್ಥಾನ ಗೆದ್ದರೆ ಹೆಚ್ಚು ಎನ್ನುವ ಸಮೀಕ್ಷೆಗಳು ಬಂದಿವೆ. ತಮ್ಮ ಸೋಲನ್ನು ಖಚಿತಪಡಿಸುವ ಸಮೀಕ್ಷೆಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ. ನರೇಂದ್ರ ಮೋದಿ ಅವರು ಸೋಲು ಖಚಿತವಾಗುತ್ತಿದ್ದಂತೆ ಹೆಚ್ಚೆಚ್ಚು ಸುಳ್ಳುಗಳನ್ನು ಸೃಷ್ಟಿಸಿ ಭಾರತೀಯರ ನಡುವೆ ಬಿರುಕು ಮೂಡಿಸುತ್ತಾರೆ. ಜಾಗ್ರತೆ ವಹಿಸಿ. ತಾವು ಮೀಸಲಾತಿಗೆ ವಿರುದ್ಧವಿಲ್ಲ ಎಂದು ಸಂಘ ಪರಿವಾರದ ಮೋಹನ್ ಭಾಗವತ್ ಹೇಳಿರುವುದು ಮತ್ತೊಂದು ಸುಳ್ಳು. ಮೀಸಲಾತಿ ವಿರೋಧಿಸಿ ರಾಜ್ಯ ಸಭಾ ಸದಸ್ಯ, ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಾಮಾ ಜೋಯಿಸ್ ಕೋರ್ಟ್ ಮೆಟ್ಟಿಲೇರಿದ್ದನ್ನು ದೇಶದ ಹಿಂದುಳಿದ ಸಮುದಾಯಗಳು ಮರೆತಿಲ್ಲ. ಮಂಡಲ್ ವರದಿಗೆ ವಿರೋಧ ಮಾಡಿ ಹಿಂದುಳಿದ ಜಾತಿ-ಸಮುದಾಯಗಳ ಮಕ್ಕಳನ್ನು ಆತ್ಮಹತ್ಯೆಗೆ ತಳ್ಳಿದ್ದು ಇದೇ ಬಿಜೆಪಿ ಪರಿವಾರ ಹುಟ್ಟಿನಿಂದಲೇ ಮೀಸಲಾತಿ ವಿರೋಧಿಗಳು. ಆದರೆ ಸುಳ್ಳುಗಳ ಮೂಲಕ ಹಿಂದುಳಿದವರನ್ನು ಪದೇ ಪದೇ ವಂಚಿಸುವುದು ಇವರಿಗೆ ರೂಢಿಯಾಗಿದೆ ಈ ಬಗ್ಗೆ ಎಚ್ಚರದಿಂದಿರಿ ಎಂದಿದ್ದಾರೆ.

Previous articleನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Next articleಬಾಲಕಿ ಬಿಡಿಸಿದ ಚಿತ್ರ ಕೇಳಿ ಪಡೆದ ಮೋದಿ