ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವುದನ್ನು ಬಿಜೆಪಿ ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈ ಬಿಲ್ ಸದನದಲ್ಲಿ ಮಂಡಿಸಿದಾಗ ಸದನದ ಒಳಗಡೆ ಹಾಗೂ ಹೊರಗಡೆ ಬಿಜೆಪಿ ಉಗ್ರ ಪ್ರತಿಭಟನೆ ನಡೆಸಲಿದೆ. ದಲಿತ ಶಾಸಕರಾಗಿದ್ದ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಮುಸ್ಲಿಮರು ಬೆಂಕಿ ಹಚ್ಚಿದಾಗ ಎಲ್ಲಿಗೆ ಹೋಗಿತ್ತು ಸಿದ್ದರಾಮಯ್ಯ ಅವರ ದಲಿತ ಪ್ರೀತಿ? ಮುಸ್ಲಿಮರನ್ನು ಖುಷಿ ಪಡಿಸಲು ಕಾಂಗ್ರೆಸ್ ಯಾವ ಮಟ್ಟಕ್ಕಾದರೂ ಇಳಿಯಲು ಸಿದ್ಧ ಎಂಬುದು ಸ್ಪಷ್ಟವಾಗುತ್ತದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ವಿಷ ಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಬಿಜೆಪಿ ಮುಸ್ಲಿಮರನ್ನು ವಿರೋಧಿಸುವುದಿಲ್ಲ ಆದರೆ ನಾವು ಕಾಂಗ್ರೆಸ್‌ನ ಮುಸ್ಲಿಂ ತುಷ್ಟಿಕರಣ ರಾಜಕೀಯವನ್ನು ವಿರೋಧಿಸುತ್ತೇವೆ ಎಂದರು.