ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್

0
14

ಬೆಂಗಳೂರು: ಗುತ್ತಿಗೆದಾರರಿಗೆ ಬೆದರಿಕೆ ಮತ್ತು ಜಾತಿನಿಂದನೆ ಕೇಸ್‌ನಲ್ಲಿ ಜಾಮೀನು ಪಡೆದ ಬೆನ್ನಲ್ಲೇ ಮತ್ತೆ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್ ಆಗಿದ್ದಾರೆ.
ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನ ಬಂಧಿಸಿದ್ದಾರೆ. ಜಾಮೀನು ಪಡೆದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಶಾಸಕ ಮುನಿರತ್ನ ಬಂಧನವಾಗಿದೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರದಲ್ಲೇ ಬಂಧಿಸಿದ್ದಾರೆ.

Previous articleಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ
Next articleದಾವಣಗೆರೆ ಘಟನೆ ಗಂಭೀರವಾಗಿ ಪರಿಗಣಿಸಿ…