ಬಿಜೆಪಿಯಿಂದ ರಾಜುಗೌಡ ಸ್ಪರ್ಧೆ

0
22

ಬೆಂಗಳೂರು: ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್​ ಘೋಷಣೆ ಮಾಡಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಮಣೆ ಹಾಕಿದೆ.
ಕಾಂಗ್ರೆಸ್​ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7ರಂದು ಉಪ ಚುನಾವಣೆ ನಡೆಯಲಿದೆ.
2023ರ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಅವರ ವಿರುದ್ಧ ರಾಜುಗೌಡ 25 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಈಗ ಮತ್ತೆ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಇನ್ನು ಕಾಂಗ್ರೆಸ್​ ದಿವಂಗತ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ.

Previous articleಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳಾಪಟ್ಟಿ ಪ್ರಕಟ
Next articleನೀರು ಪೋಲು ಮಾಡಿ ಹೋಳಿ ಆಚರಣೆ..