ಬೀದರ್‌ನಲ್ಲಿ ಪಾರುಪತ್ಯ ಸಾಧಿಸಿದ ಕಾಂಗ್ರೆಸ್

0
19

ಬೆಂಗಳೂರು: ಬೀದರ ಬದಲಾವಣೆಯ ಆಶಯಕ್ಕೆ ಸಂದ ಜಯವಾಗಿದೆ ಎಂದು ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಲೋಕಸಭಾ ಚುನಾವಣೆಯಲ್ಲಿ ಬೀದರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಯುವ ನಾಯಕ ಸಾಗರ ಈಶ್ವರ ಖಂಡ್ರೆ ಅವರನ್ನು ಗೆಲ್ಲಿಸಿದ ಬೀದರ ಮಹಾಜನತೆಗೆ ತುಂಬು ಹೃದಯದ ಧನ್ಯವಾದಗಳು
ಇದು ಬೀದರ ಬದಲಾವಣೆಯ ಆಶಯಕ್ಕೆ ಸಂದ ಜಯವಾಗಿದೆ. ಈ ಗೆಲುವು ಪ್ರಗತಿ ಪಥಕ್ಕೆ ಮುನ್ನುಡಿ ಬರೆಯಲಿದೆ. ನೀವು ನಮ್ಮ ಮೇಲೆ ವಿಶ್ವಾಸವಿಟ್ಟು ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುವೆವು, ನಿಮ್ಮೆಲ್ಲರ ಪ್ರೀತಿ, ಆಶೀರ್ವಾದ, ಬೆಂಬಲ ಸದಾ ಹೀಗೆ ಇರಲಿ. ಮತ್ತೊಮ್ಮೆ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

Previous articleಮತ ಎಣಿಕೆ ಕೇಂದ್ರದಿಂದ ಹೊರನಡೆದ ಬಿಜೆಪಿ ಅಭ್ಯರ್ಥಿ ರಾಜೂಗೌಡ
Next articleಚುನಾವಣಾ ಫಲಿತಾಂಶ: ಬಿಜೆಪಿ ಅಭಿಮಾನಿ ಹೃದಯಾಘಾತದಿಂದ ಸಾವು