ಬೂತ್ ಮಟ್ಟದಿಂದ ಪಕ್ಷ ಸಜ್ಜು

0
14

ತುಮಕೂರು:‌ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದಲಿಂಗ ಶ್ರೀಗಳ ಭೇಟಿಯಾಗಿ ಆಶಿರ್ವಾದ ಪಡೆದುಕೊಂಡರು. ತುಮಕೂರು ಬಿಜೆಪಿ ಜಿಲ್ಲಾ ಕಾರ್ಯಾಲಯ ಕಮಲ ಕೃಪಕ್ಕೆ ಭೇಟಿ ನೀಡಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ದೀಪಾವಳಿ ಹಬ್ಬದ ಶುಭ ಕೋರಲಾಯಿತು. ಮುಂಬರುವ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಬೂತ್ ಮಟ್ಟದಿಂದ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಎಂ.ಬಿ.ನಂದೀಶ್, ಶಾಸಕರಾದ ಬಿ.ಸುರೇಶ್ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ್, ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಮಧುಗಿರಿ ಜಿಲ್ಲಾಧ್ಯಕ್ಷರಾದ ಮಂಜುನಾಥ್, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Previous articleಕನ್ನಡದ ಶೇಕ್ಸ್‌ಪಿಯರ್‌ ಕಂದಗಲ್ಲ ಹನುಮಂತರಾಯರು
Next articleಆಪರೇಶನ್ ಕಮಲ: ಸ್ವಲ್ಪ ಕಾದು ನೋಡಿ