ಬೆಂಗಳೂರಿ​ನಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ

0
44
ಬಂಧನ

ಬೆಂಗಳೂರು: ನಗರದ ಹೊರವಲಯಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ.
ಪಾಕಿಸ್ತಾನ ಪ್ರಜೆ ಜಿಗಣಿಯಲ್ಲಿ ವಾಸವಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗುಪ್ತಚರ ಇಲಾಖೆ ಅಧಿಕಾರಿಗಳ ಮಾಹಿತಿ ಆಧರಿಸಿ, ಜಿಗಣಿ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ, ಕುಟುಂಬ ಸಮೇತ ಪಾಕಿಸ್ತಾನ ಪ್ರಜೆಯನ್ನು ಬಂಧಿಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿಯಾಗಿರುವ ಪಾಕ್ ಪ್ರಜೆಯು ಪತ್ನಿ, ಇಬ್ಬರು ಮಕ್ಕಳ ಜತೆ ವಾಸವಿದ್ದ. ಆತನ ಪತ್ನಿ ಬಾಂಗ್ಲಾದೇಶದವಳು ಎಂದು ತಿಳಿದು ಬಂದಿದೆ. ಧರ್ಮದ ವಿಚಾರದಲ್ಲಿ ಪಾಕಿಸ್ತಾನದಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು. ಕೊನೆಗೆ ಅಲ್ಲಿ ಇರೋಕೆ ಆಗದೆ ಬಾಂಗ್ಲಾದೇಶಕ್ಕೆ ಎಸ್ಕೇಪ್ ಆಗಿದ್ದ. ಇದಾದ ಬಳಿಕ ಬಾಂಗ್ಲಾದೇಶದ ಢಾಕಾದಲ್ಲಿ ವಾಸವಿದ್ದ. ಢಾಕಾದಲ್ಲಿ ಇದ್ದುಕೊಂಡು ಅಲ್ಲಿನ ಯುವತಿಯ ವಿವಾಹವಾಗಿದ್ದ. ಬಳಿಕ 2014ರಲ್ಲಿ ಪತ್ನಿ ಜತೆ ಅಕ್ರಮವಾಗಿ ದೆಹಲಿಗೆ ಬಂದಿದ್ದ. ಸ್ಥಳೀಯ ವ್ಯಕ್ತಿಯ ನೆರವಿನಿಂದ ಗುರುತಿನ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್ ಮಾಡಿಸಿಕೊಂಡು ಇಡೀ ಕುಟುಂಬ 2018ರಲ್ಲಿ ಬೆಂಗಳೂರಿಗೆ ಬಂದಿದ್ದರು. ಇಬ್ಬರು ಮಕ್ಕಳ ಜತೆಗೆ ದಂಪತಿ ಜಿಗಣಿಯಲ್ಲಿ ವಾಸವಿದ್ದರು. ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಸಂಗ್ರಹಿಸಿದ್ದರು. ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಜಿಗಣಿ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Previous articleದ್ವೇಷದ ರಾಜಕಾರಣ ಮಾಡೋದು ಸೂಕ್ತವಲ್ಲ
Next articleನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ