Home Advertisement
Home ತಾಜಾ ಸುದ್ದಿ ಬೆಳಗಾವಿ ಪ್ರಕರಣ: ಸರ್ಕಾರದ ನಡೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ

ಬೆಳಗಾವಿ ಪ್ರಕರಣ: ಸರ್ಕಾರದ ನಡೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ

0
54

ಬೆಳಗಾವಿ: ಸರ್ಕಾರದ ಈ ನಡೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಕುರಿತು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕಳೆದ ವಾರ ಬೆಳಗಾವಿ ಗ್ರಾಮಾಂತರದ ವಂಟಮೂರಿಯಲ್ಲಿ ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಈ ವಿಚಾರವಾಗಿ ಇಂದು (ಡಿ.15) ಅಧಿವೇಶನ ಮುಗಿದ ನಂತರ ಬೆಳಗಾವಿ ಚೆನ್ನಮ್ಮ ಸರ್ಕಲ್​ನಲ್ಲಿ ಮಧ್ಯಾಹ್ನ 3.30 ಕ್ಕೆ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ವಿಧಾನಸಭಾ ಆಧಿವೇಶನ ನಡೆಯುತ್ತಿರುವಂತಹ ಸಂದರ್ಭದಲ್ಲಿಯೇ ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ದೌರ್ಜನ್ಯ ಖಂಡನೀಯ‌. ಇದು ಇಡೀ ರಾಜ್ಯದ ಜನತೆ ತಲೆತಗ್ಗಿಸುವಂತಹ ವಿಚಾರ. ದೇಶಾದ್ಯಂತ ಸುದ್ದಿಯಾದರೂ ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸರ್ಕಾರದ ಈ ನಡೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.

Previous articleಬೆಳಗಾವಿಗೆ ಬಿಜೆಪಿಯ ಸತ್ಯಶೋಧನಾ ಸಮಿತಿ
Next articleವೀಸಾ ಇಲ್ಲದೆ ವಿದೇಶಕ್ಕೆ