ಬೆಳಗಾವಿ: ಶಾಲೆಗಳಿಗೆ ರಜೆ ಘೋಷಣೆ

0
15

ಬೆಳಗಾವಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ.
ಅಂಗನವಾಡಿ ಕೇಂದ್ರಗಳಿಗೂ ರಜೆ:
ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳಿಗೂ ಬುಧವಾರ(ಜು.26) ರಜೆ ಘೋಷಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Previous articleವಿಜಯಪುರದಲ್ಲಿ ಮಳೆ ಮಧ್ಯೆ ಭೂಕಂಪನ
Next articleಹಠಾತ್ ಪ್ರವಾಹ ಮುನ್ಸೂಚನೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ಸಲಹೆ