ಬೆಳಗಾವಿಯಲ್ಲಿ ʼಪ್ರಜಾಧ್ವನಿ’ ಕಾಂಗ್ರೆಸ್‌ ಯಾತ್ರೆಗೆ ಚಾಲನೆ

0
16
ಯಾತ್ರೆ

ಬೆಳಗಾವಿ: ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರಜಾ ಧ್ವನಿ ಬಸ್ ಯಾತ್ರೆಗೆ ಬೆಳಗಾವಿಯ ವೀರಸೌಧದಲ್ಲಿ ಇಂದು ಚಾಲನೆ ನೀಡಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ನಮನ ಸಲ್ಲಿಸುವ ಮೂಲಕ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ಪ್ರಜಾ ಧ್ವನಿ ಬಸ್ ಯಾತ್ರೆ ಆರಂಭಿಸಿದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಸೇರಿದಂತೆ ಪಕ್ಷದ ಮುಖಂಡರು ಯಾತ್ರೆಗೆ ಜೊತೆಯಾದರು.

Previous articleವಿಜಯನಗರ: ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವು, ಹಲವರು ಅಸ್ವಸ್ಥ
Next articleನಾಟು ನಾಟುಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ: ಆರ್.ಆರ್.ಆರ್ ತಂಡಕ್ಕೆ ಮೋದಿ ಅಭಿನಂದನೆ