ಬೈಕ್‌ ಲಾರಿ ಡಿಕ್ಕಿ: ಇಬ್ಬರ ಸಾವು

0
22

ವಿಜಯಪುರ: ಲಾರಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದ್ದು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು, ರಾಷ್ಟ್ರೀಯ ಹೆದ್ದಾರಿಯನ್ನ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಮನಗೂಳಿ ಪಟ್ಟಣದ ಭೀಮಶಿ ಹಿಟ್ನಳ್ಳಿ (56) ಹಾಗೂ ಖಂಡೋಬಾ ಘೋರ್ಪಡೆ (60) ಮೃತಪಟ್ಟ ದುರ್ದೈವಿಗಳು. ಗ್ರಾಮಸ್ಥರು ಪ್ರತಿಭಟನೆಯಿಂದಾಗಿ ವಾಹನಗಳು ಸಾಲುಗಟ್ಟಿ ನಿಂತಿವೆ.ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous articleಒಳಮೀಸಲಾತಿ: ಸಂಪುಟ, ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ
Next articleಮೂರನೇ ಮಹಡಿಯಿಂದ ಜಿಗಿದ ಡೆಪ್ಯೂಟಿ ಸ್ಪೀಕರ್