ಬೊಮ್ಮಾಯಿ ಪುತ್ರನ ಸೋಲು ಖಚಿತ

0
31

ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಶಿಗ್ಗಾವಿ ಮತಕ್ಷೇತ್ರದ ಬಿಜೆಪಿ ಟಿಕೆಟ್ ಸಾಮಾನ್ಯ ಕಾರ್ಯಕರ್ತರಿಗೆ ಕೊಡುವ ನಿರೀಕ್ಷೆ ಇತ್ತಂತೆ. ಆದರೆ, ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಿದ್ದಕ್ಕೆ ಆ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರು ಆಕ್ರೋಶಗೊಂಡಿದ್ದಾರೆ. ಹೀಗಾಗಿ, ಆ ಪಕ್ಷದ ಸೋಲು ಖಚಿತ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ. ಕಳೆದ ಲೋಕಸಭೆ ಚುನಾವಣೆಯಲ್ಲಿ ಆ ಕ್ಷೇತ್ರದಿಂದ ಕಾಂಗ್ರೆಸ್‌ಗೆ ಬಂದಿದ್ದ ಮತಗಳಿಗಿಂತ ಹೆಚ್ಚು ಮತಗಳು ಈ ಬಾರಿ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರನ್ನೂ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಗಳು ವಿಚಾರಣೆ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿದರು.

Previous articleಸಚಿವ ಜಮೀರ್ ಅಹ್ಮದ್ ಖಾನ್‌ನನ್ನು ಗಲ್ಲಿಗೇರಿಸಿ
Next articleವಿಪಕ್ಷ ನಾಯಕರ ವಿರುದ್ಧ ಲೋಕಾಯುಕ್ತರು ಕ್ರಮ ಜರುಗಿಸಲಿ