ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ

0
16

ಕಾರವಾರ: ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ಇಂದು ನಡೆದಿದೆ.
ಹಾಡುವಳ್ಳಿಯ ಶಂಭು ಭಟ್(65) ಆತನ ಪತ್ನಿ ಮಾದೇವಿ ಭಟ್, ಮಗ ರಾಜೀವ್ ಭಟ್(34) ಹಾಗೂ ಮಗನ ಪತ್ನಿ ಕುಸುಮಾ ಭಟ್(30) ಕೊಲೆಯಾದ ವರು. ಕತ್ತಿಯಲ್ಲಿ ಕಡಿದು ನಾಲ್ವರನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದ್ದು ಕುಟುಂಬದ ಒಂದು ಮಗು ಮಾತ್ರ ಬದುಕುಳಿದಿದೆ ಎನ್ನಲಾಗಿದೆ.
ಇನ್ನು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಭೀಕರ ಕೃತ್ಯ ಇದೀಗ ಹಾಡುವಳ್ಳಿಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದ್ದು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Previous articleಹೋಗುತ್ತಿದ್ದ ಜೀವ ಮರಳಿ ತಂದ ಪೊಲೀಸ್..!‌ ಮಾನವೀಯತೆಗೆ ಹೊಸ ಭಾಷ್ಯ ಬರೆದ ಆರಕ್ಷಕ
Next articleಬಿಜೆಪಿಯೇ ಭರವಸೆಯಂದು ಜನ ನಂಬಿದ್ದಾರೆ: ಸಿಎಂ ಬೊಮ್ಮಾಯಿ