ಮಂಗಳೂರು ನಗರ ಪೊಲೀಸ್ ಕಮಿಷನರ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ವರ್ಗಾವಣೆ

0
27

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ.

ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅಗರ್‌ವಾಲ್‌ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ.

Previous articleಓಟಿ ಗೋಸ್ಕರ ಗ್ಯಾರಂಟಿ ಕೊಡುತ್ತಿದ್ದೀರಾ?ಅಥವಾ ಜನ ಬದುಕಲು ಕೊಡುತ್ತೀರಾ
Next articleಶಾಸಕರ ಆಪ್ತದಿಂದಲೇ ಎಸ್ಪೀಟ್ ದಂಧೆ