ಮತದಾನ ಮಾಡಿದ ಫೋಟೋ ತೆಗೆದು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟ ಮತದಾರ!

0
47

ದಾವಣಗೆರೆ: ಮತಗಟ್ಟೆಯೊಳಗೆ ಮೊಬೈಲ್, ಕ್ಯಾಮೆರಾ, ವಿಡಿಯೋ ಚಿತ್ರೀಕರಣ ನಿಷಿದ್ಧವಿದ್ದರೂ ಯುವ ಮತದಾರನೊಬ್ಬ ಪಕ್ಷವೊಂದರ ಅಭ್ಯರ್ಥಿಗೆ ಮತದಾನ ಮಾಡಿದ ಫೋಟೋವನ್ನು ಮೊಬೈಲ್‌ನಲ್ಲಿ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವೈರಲ್ ಮಾಡಿದ ಘಟನೆ ದಾವಣಗೆರೆ ನಗರದ ಪ್ರತ್ಯೇಕ ಮತಗಟ್ಟೆಗಳಲ್ಲಿ ಮೂರು ಪ್ರಕರಣ ನಡೆದಿವೆ.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರಪಾಲಿಕೆಯ 37ನೇ ವಾಡ್೯ನ ಉರ್ದು ಶಾಲೆಯ ಬೂತ್ ನಂಬರ್ 126 ರ ಮತಗಟ್ಟೆಯಲ್ಲಿ ಬೆಳಗ್ಗೆ ಮತದಾನ ಮಾಡಿದ ಬಳಿಕ ಆ ಯುವಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವೈರಲ್ ಮಾಡಿದಾಗ ಈ ಪ್ರಕರಣ ಬಯಲಿಗೆ ಬಂದಿದೆ.
ಅದೇ ರೀತಿ ಪ್ರತ್ಯೇಕ ಮತಗಟ್ಟೆಯಲ್ಲಿ ಮತ್ತೊಂದು ಪ್ರಕರಣ ನಡೆದಿವೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಇನ್ನೊಂದು ಪ್ರಕರಣ ನಡೆದಿದೆ. ಈ ಸುದ್ದಿ ತಿಳಿದ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ, ಎಸ್ಪಿ ಡಾ.ಕೆ.ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮತಗಟ್ಟೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

Previous articleಧಾರವಾಡ ಜಿಲ್ಲೆ: ಮಧ್ಯಾಹ್ನ1 ಗಂಟೆವರೆಗೆ ಮತದಾನ ವಿವರ
Next articleಜಿಲ್ಲೆಯಲ್ಲಿ ಶೇ.40ರಷ್ಟು ಮತದಾನ