ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಬಾರದು ಎಂದು ಆಗ್ರಹಿಸಿದರು.