ಹುಬ್ಬಳ್ಳಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ರಾಷ್ಟ್ರಸಂತ ಶ್ರೀ ಗುಣಧರನಂದಿ ಮಹಾರಾಜ್ ಹೇಳಿದರು
ನಾನು ಕರ್ನಾಟಕ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ಸುಮಾರು ೪೦೦ ಕಿ.ಮೀ. ಸಂಚರಿಸಿದ್ದೇನೆ. ಜನರು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸಿದ್ದಾರೆ. ಎಲ್ಲೆಡೆ ಮೋದಿಗೆ ಜೈಕಾರ ಹಾಕುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಹೊಗಳುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಕೋವಿಡ್ ಸಂಕಷ್ಟದಲ್ಲಿ ಕೈಗೊಂಡ ಸುರಕ್ಷತಾ ಕ್ರಮಗಳು, ಉಕ್ರೇನ್‌ನಲ್ಲಿ ಸಿಲುಕಿದ ಸಹಸ್ರಾರು ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಮರಳಿ ಕರೆಸಿದ್ದು, ಜಮ್ಮು-ಕಾಶ್ಮೀರದಲ್ಲಿ ಜನರು ನೆಮ್ಮದಿಯಿಂದ ಬದುಕುವಂತೆ ಮಾಡಿದ್ದನ್ನು ದೇಶದ ಜನರು ಮೆಚ್ಚಿಕೊಂಡಿದ್ದಾರೆ ಎಂದು ಹೇಳಿದರು