SK Home Ad
Home ಅಪರಾಧ ಮದುವೆಯಾಗದಕ್ಕೆ ಮನನೊಂದು ಆತ್ಮಹತ್ಯೆ

ಮದುವೆಯಾಗದಕ್ಕೆ ಮನನೊಂದು ಆತ್ಮಹತ್ಯೆ

0
144
ಆತ್ಮಹತ್ಯೆ

ಚಿಕ್ಕೋಡಿ: ಮದುವೆಯಾಗಲು ಹೆಣ್ಣು ಸಿಗದ ಕಾರಣ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಾಥ ಸುರೇಶ್ ಕೇಸ್ತಿ (27) ಎಂದು ಗುರುತಿಸಲಾಗಿದೆ. ಯುವಕ ನಗರದಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ. ಅತಿಯಾದ ಸಾಲ ಹಾಗೂ ಮದುವೆಗೆ ಹೆಣ್ಣು ಸಿಗದೆ ನೊಂದಿದ್ದ. ಗುರುವಾರ ಬೆಳಗ್ಗೆ ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.