ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಪಾರ್ಥೀವ ಶರೀರವನ್ನು ಎಐಸಿಸಿ ಮುಖ್ಯ ಕಚೇರಿಗೆ ತರಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಕಾಂಗ್ರೆಸ್ ಕಚೇರಿಯಿಂದ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ಆರಂಭವಾಗಲಿದೆ. ಒಂದು ಗಂಟೆ ಅವರ ಪಾರ್ಥೀವ ಶರೀರವನ್ನು ಎಐಸಿಸಿ ಕಚೇರಿಯಲ್ಲಿ ಇರಿಸಿ, ಬಳಿಕ ಅಂತ್ಯ ಸಂಸ್ಕಾರ ನಡೆಯುವ ನಿಗಮ್‌ಬೋದ್ ಘಾಟ್‌ಗೆ ತೆಗೆದುಕೊಂಡು ಹೋಗಲಾಗುವುದು. ಅಲ್ಲಿ ಸರ್ವ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.