ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

0
34

ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಯಲ್ಲಿ ಈ ಘಟನೆ ನಡೆದಿದ್ದು. ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂದು ಗುರುತಿಸಲಾಗಿದೆ.ಇನ್ನು ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಸದ್ಯ ಮೂವರ ಮೃತದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous articleರಾಜ್ಯಪಾಲರು ಕಾಂಗ್ರೆಸ್ಸಿಗರ ಪಾಲಿಗೆ ಸಿಂಹ ಸ್ವಪ್ನ
Next articleನಿವೃತ್ತ ನೌಕರರ ಮರುನೇಮಕ ಯಾವ ಪುರುಷಾರ್ಥಕ್ಕೆ