ಮರಾಠ ಮೀಸಲಾತಿಗೆ ಮಹಾರಾಷ್ಟ್ರ ಸರ್ಕಾರ ಅಸ್ತು

0
21

ಮುಂಬೈ: ಏಕನಾಥ್‌ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮರಾಠ ಸಮಯದಾಯದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬಳಿಕ ಸಾಮಾಜಿಕ ಕಾರ್ಯಕರ್ತ ಮನೋಜ್ ಜಾರಾಂ ನೇತೃತ್ವದಲ್ಲಿ ಶುಕ್ರವಾರ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಮುಕ್ತಾಯಗೊಂಡಿದೆ. ಬೆಳಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮನೋಜ್ ಜಾರಾಂಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಕೆಲವೇ ಗಂಟೆಗಳಲ್ಲಿ ಉಪವಾಸ ಸತ್ಯಾಗ್ರಹವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಮನೋಜ್ ಜಾರಾಂಗೆ ಪ್ರಕಟಿಸಿದರು. ಸಿ.ಎಂ ಏಕನಾಥ್ ಶಿಂಧೆ ಅವರು ಜಾರಾಂಗೆ ಅವರಿಗೆ ಜ್ಯೂಸ್ ನೀಡಿದರು. ಅದನ್ನು ಸ್ವೀಕರಿಸಿದ ಜಾರಾಂಗೆ ಸತ್ಯಾಗ್ರಹವನ್ನು ಹಿಂಪಡೆಯಲಾಗಿದೆ ಎಂದು ಘೋಷಣೆ ಮಾಡಿದರು. ಜನವರಿ 20 ರಂದು ಜಾಲ್ನಾದಿಂದ ಆರಂಭವಾದ ಮೀಸಲಾತಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಶನಿವಾರ ಮುಂಬೈ ನಗರ ಪ್ರವೇಶಿಸಲು ಸಜ್ಜಾಗಿತ್ತು. ಅಷ್ಟರಲ್ಲಿ ಮಹಾರಾಷ್ಟ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದು, ಪ್ರತಿಭಟನೆ ಸುಖಾಂತ್ಯ ಕಂಡಿದೆ.

Previous articleಹುಬ್ಬಳ್ಳಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವವಕ್ಕೆ ಚಾಲನೆ
Next articleವಿಜಯಪುರ-ಬೆಂಗಳೂರು ಎಸಿ ವೋಲ್ವೋ ಬಸ್ ಸಂಚಾರ