Home Advertisement
Home ಅಪರಾಧ ಮಹಿಳೆ ಕೊಲೆ ಮಾಡಿ ಸುಟ್ಟು ಹಾಕಿದ ಕೊಲೆಗಡುಕರು

ಮಹಿಳೆ ಕೊಲೆ ಮಾಡಿ ಸುಟ್ಟು ಹಾಕಿದ ಕೊಲೆಗಡುಕರು

0
138

ಕಲಬುರಗಿ: ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಪೆಟ್ರೋಲ್‌ ಸುರಿದು ಸುಟ್ಟು ಹಾಕಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಜ್ಯೋತಿ (29) ಹತ್ಯೆಯಾದ ಮಹಿಳೆ. ಕಳೆದ 10 ವರ್ಷದ ಹಿಂದೆ ಮದುವೆ ಆಗಿದ್ದ ಈಕೆ 5 ವರ್ಷದಿಂದ ಗಂಡನ ಮನೆ ಬಿಟ್ಟು ತವರು ಮನೆಯಲ್ಲಿ ವಾಸಿಸುತ್ತಿದ್ದಳು ಎನ್ನಲಾಗಿದೆ.
ಗುರುವಾರ ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದ ಜ್ಯೋತಿ, ಮಧ್ಯಾಹ್ನ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಕೌಟುಂಬಿಕ ಕಲಹದ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.