ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ: ಯೋಜನೆ ಕುರಿತು ಸ್ಪಷ್ಟೀಕರಣ

0
21

ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಕೆಎಸ್​ಆರ್​ಟಿಸಿ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು ಎಂದು ತಿಳಿಸಿದೆ.

Previous articleಗ್ಯಾಸ್ ಕಟ್ಟರ್ ಬಳಸಿ ಕೆನರಾ ಬ್ಯಾಂಕ್ ಎಟಿಎಂ ದರೋಡೆ
Next articleಸಂಯುಕ್ತ ಕರ್ನಾಟಕ: ಈ ದಿನದ ಪ್ರಮುಖ 7 ಸುದ್ದಿಗಳು