ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ಗೆ ಇಡಿ ಸಮನ್ಸ್

0
21

ಹೈದರಾಬಾದ್‌: ಹೈದರಾಬಾದ್ ಕ್ರಿಕೆಟ್ ಅಸೋಶಿಯೇಷನ್‌ನಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರ ಸಂಬಂಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ
ಕಾಂಗ್ರೆಸ್‌ ಮುಖಂಡ ಮೊಹಮ್ಮದ್ ಅಜರುದ್ದೀನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿನ ಹಣಕಾಸು ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಇಡಿ ಶೋಧ ನಡೆಸಿತ್ತು. ಅದರ ತನಿಖೆಯ ಭಾಗವಾಗಿ ಕಾಂಗ್ರೆಸ್ ನಾಯಕನಿಗೆ ನೋಟಿಸ್ ನೀಡಲಾಗಿದೆ.

Previous articleಒಳಮೀಸಲಾತಿ ಜಾರಿಗೆ ಒತ್ತಾಯಿಸಿ ರಾಯಚೂರು ಬಂದ್
Next articleಮಂಗಳೂರು ದಸರಾಗೆ ಅದ್ದೂರಿ ಚಾಲನೆ