ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನ

0
18

ಹುಬ್ಬಳ್ಳಿ : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್‌.ಎಂ. ಕೃಷ್ಣ ಮಂಗಳವಾರ ನಸುಕಿನ ಜಾವ ನಿಧನರಾದರು
ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾದರು. ವಯೋಸಹಜ ಅನಾರೋಗ್ಯದ ಕಾರಣ ಅವರನ್ನು ಅಕ್ಟೋಬ‌ರ್ 19ರಂದು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಇಂದು ನಸುಕಿನ ಜಾವ 2:30ರ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.

ಎಸ್. ಎಂ. ಕೃಷ್ಣರ ರಾಜಕೀಯ ಹೆಜ್ಜೆಗಳು :
ಎಸ್‌.ಎಂ. ಕೃಷ್ಣ ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರು. 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಸಹ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ 2017ರ ಮಾರ್ಚ್‌ನಲ್ಲಿ ಬಿಜೆಪಿ ಸೇರಿದ್ದರು.
ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಒಬ್ಬರು.

ಎಸ್.ಎಂ.ಕೃಷ್ಞ ಬಾಲ್ಯ ಮತ್ತು ಶಿಕ್ಷಣ :
ಮಂಡ್ಯ ಜಿಲ್ಲೆಯ ಮದ್ದೂರು ತಾ. ಸೋಮನಹಳ್ಳಿ ಗ್ರಾಮದಲ್ಲಿ 1932ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ SM ಕೃಷ್ಣ ಜನಿಸಿದ್ದರು. ಇವರ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬ್ಯಾಚುಲ‌ರ್ ಆಫ್‌ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನ ಲಾ ಸ್ಕೂಲ್‌ನಿಂದಲೂ ಪದವಿ ಪಡೆದಿದ್ದರು.
1999 ರಿಂದ 2004ರವರೆಗೆ ಸಿಎಂ ಆಗಿದ್ದರು

S.M. ಕೃಷ್ಣ 1989-1993ರಲ್ಲಿ ವಿಧಾನಸಭೆಯ ಸ್ಪೀಕ‌ರ್ ಅಗಿದ್ದರು. , 1999 ರಿಂದ 2004ರವರೆಗೆ ಮುಖ್ಯಮಂತ್ರಿಯಾಗಿ, 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, 2009 ರಿಂದ 2012ರವರೆಗೆ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಬಳಿಕ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕೊನೆಯದಾಗಿ ಬಹಿರಂಗವಾಗಿ ಪ್ರಚಾರ ನಡೆಸಿದ್ದರು.
ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

Previous articleಭಗವದ್ಗೀತೆ ಮತ್ತು ಕಾನೂನು
Next articleನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ