Home Advertisement
Home ನಮ್ಮ ಜಿಲ್ಲೆ ಕೊಪ್ಪಳ ಮಾಜಿ ಶಾಸಕರ ವಿರುದ್ಧ ಪ್ರಕರಣ ದಾಖಲು

ಮಾಜಿ ಶಾಸಕರ ವಿರುದ್ಧ ಪ್ರಕರಣ ದಾಖಲು

0
143
ದೊಡ್ಡನಗೌಡ ಪಾಟೀಲ್

ಕೊಪ್ಪಳ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ.
ತಾವರಗೇರಾ ಪಟ್ಟಣದ ಹುಲಿಯಾಪುರ ಗ್ರಾಮದ ವಿಶ್ವನಾಥ ದೇವಸ್ಥಾನದಲ್ಲಿ ಚುನಾವಣಾಧಿಕಾರಿಗಳ ಪರವಾನಿಗೆ ಪಡೆಯದೇ ಮಾಜಿ ಶಾಸಕ ಹಾಗೂ ಬಿಜೆಪಿ ಸಂಭಾವ್ಯ ಅಭ್ಯರ್ಥಿ ದೊಡ್ಡನಗೌಡ ಪಾಟೀಲ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಹೀಗಾಗಿ ಧಾರ್ಮಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡ ಹಿನ್ನೆಲೆಯಲ್ಲಿ ಕುಷ್ಟಗಿಯ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸೂಗಪ್ಪ ಹನುಮಂತಪ್ಪ ದೂರನ್ನು ಆಧರಿಸಿ, ಪ್ರಕರಣ ದಾಖಲಿಸಲಾಗಿದೆ.

Previous articleಸಿಡಿಲು ಬಡಿದು ಯುವಕರಿಬ್ಬರ ಸಾವು
Next articleಚರಂಡಿಯಲ್ಲಿ ಸಿಕ್ತು ಲಕ್ಷಾಂತರ ಮೌಲ್ಯದ ಸಾರಾಯಿ