ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಒತ್ತುವರಿ ಪ್ರಕರಣ: ಸರ್ವೆ ಕಾರ್ಯ ಆರಂಭ

0
32

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸರ್ವೆ ಕಾರ್ಯ ಆರಂಭವಾಗಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಜಿನಕಲುಕುಂಟ ಅರಣ್ಯ ಪ್ರದೇಶದ, ಹೊಸಹುಡ್ಯ ಗ್ರಾಮದ ಸರ್ವೆ ನಂ. 1 ಮತ್ತು 2ರಲ್ಲಿನ 61.39 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪದ ಹಿನ್ನೆಲೆ ಜಿಲ್ಲಾಧಿಕಾರಿ ಎಂ.ಆರ್. ರವಿ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಸಲಾಯಿತು.
ಈ ವೇಳೆ ಮಾತನಾಡಿದ ರಮೇಶ್ ಕುಮಾರ್ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹೈಕೋರ್ಟ್‌ನಲ್ಲಿ 2002ರಲ್ಲಿ ನಾನೇ ಜಂಟಿ ಸರ್ವೆ ಮಾಡಿ ಜಾಗ ಗುರುತಿಸಿ ಕೊಡುವಂತೆ ಮನವಿ ಮಾಡಿದ್ದೇನೆ. ನನಗೆ ಒಂದು ಇಂಚು ಅರಣ್ಯ ಭೂಮಿ ಬೇಡ, ನೀವು ಸರ್ವೆ ಮಾಡಿ ಜಾಗ ಗುರುತಿಸಿ ಎಂದಿದ್ದಾರೆ.
ಈನ್ನು ಡಿಸಿಎಫ್ ಸರೀನಾ, ಎಸಿ ಮೈತ್ರಿ ಸ್ಥಳದಲ್ಲಿ ಹಾಜರಿದ್ದರು. ಎಸ್ಪಿ ನಿಖಿಲ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Previous articleಶೀಘ್ರದಲ್ಲೇ ಹೇಗೆ ಒದ್ದು ಅಧಿಕಾರ ಕಿತ್ತುಕೊಳ್ಳಲಿದ್ದಾರೆ: ಟ್ರೈಲರ್ ಬಿಡುಗಡೆ
Next articleಸೀತಾಳಭಾವಿ ಸೇರಿ ೪ ಪತ್ರಕರ್ತರಿಗೆ ಕೆಯುಡಬ್ಲ್ಯುಜೆ ಪ್ರಶಸ್ತಿ