ಮೀನು ಹಿಡಿಯಲು ಹೋದ ತಂದೆ ಮಕ್ಕಳು ನೀರುಪಾಲು

0
32

ಬೆಳಗಾವಿ: ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ಸೇರಿ ಮೂವರು ನೀರು ಪಾಲಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಬಳಿ ಘಟಪ್ರಭಾ ನದಿಯಲ್ಲಿ ನಡೆದಿದೆ.
ಬೆನಕನಹೊಳಿ ಗ್ರಾಮದ ಲಕ್ಷ್ಮಣ ರಾಮ ಅಂಬಲಿ(೪೯), ಇವರ ೧೪ ವರ್ಷದ ಮತ್ತು ೧೨ ವರ್ಷದ ಇಬ್ಬರು ಪುತ್ರರು ನೀರಿನಲ್ಲಿ ಮುಳುಗಿರುವುದಾಗಿ ಹೇಳಲಾಗಿದೆ. ಲಕ್ಷ್ಮಣ ಹಾಗೂ ಅವರ ಮಕ್ಕಳು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ಸಂಜೆ ಬೈಕ್ ನಿಲ್ಲಿಸಿ, ಮೀನು ಹಿಡಿಯಲು ನದಿ ನೀರಿಗೆ ಇಳಿದಿದ್ದರು. ಆದರೆ, ಸೋಮವಾರ ಬೆಳಿಗ್ಗೆಯಾದರೂ ಇವರು ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಮಕನಮರಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರಿಗಾಗಿ ಎನ್‌ಡಿಆರ್‌ಎಫ್ ತಂಡದಿಂದ ಶೋಧ ಕಾರ್ಯ ಮುಂದುವರಿದಿದೆ.

Previous article೨೦ ಗುಂಟೆ ಜಮೀನು ವಿವಾದ: ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ
Next articleಆಪರೇಷನ್ ಕಮಲ: ದಾಖಲೆ ಆಡಿಯೋ ಇದ್ದರೆ ಬಿಡುಗಡೆ ಮಾಡಲಿ