ಹೊಸದಿಲ್ಲಿ: ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ.
ಗುರುವಾರ ಸಂಜೆ ಸುಮಾರು 6.30ರ ಹೊತ್ತಿಗೆ ಕೇಜ್ರಿವಾಲ್ ನಿವಾಸಕ್ಕೆ ಆಗಮಿಸಿದ ಇ.ಡಿ. ಅಧಿಕಾರಿಗಳು ಸತತ ಮೂರ್ನಾಲ್ಕು ಗಂಟೆಗಳ ವಿಚಾರಣೆಯ ಬಳಿಕ ಅವರನ್ನು ವಶಕ್ಕೆ ಪಡೆದರು.
ಇದಕ್ಕೂ ಮುನ್ನ, ಅಕ್ರಮ ಹಣ ವರ್ಗಾವಣೆ ಕುರಿತಂತೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಜಾರಿಗೊಳಿಸಲಾಗಿರುವ ಸಮನ್ಸ್ ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್ ಮನವಿ ಸಲ್ಲಿಸಿದ್ದರು. ಆದರೆ, ಅವರ ಮನವಿಯನ್ನು ದೆಹಲಿ ನ್ಯಾಯಾಲಯ ಗುರುವಾರದ (ಮಾ. 21) ವಿಚಾರಣೆಯಲ್ಲಿ ತಳ್ಳಿಹಾಕಿತ್ತು.