ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಸಿಂಗ್ ರಾಜೀನಾಮೆ ಸಲ್ಲಿಸಿದ್ದು, ಇದರ ಬೆನ್ನಲ್ಲೇ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ದೆಹಲಿ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.
48 ಸ್ಥಾನಗಲ್ಲಿ ಜಯಿಸಿರುವ ಬಿಜೆಪಿ ಸರ್ಕಾರ ರಚಿಸಲಿದ್ದು, ಲೆಫ್ಟಿನೆಂಟ್ ಗವರ್ನರ್ ಬಳಿ ಇಂದು (ಫೆಬ್ರವರಿ 09) ಹಕ್ಕು ಮಂಡಿಸುವ ಸಾಧ್ಯತೆಯಿದೆ. ಬಿಜೆಪಿಯ ಪರ್ವೇಶ್ ವರ್ಮಾ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಸದ್ಯಕ್ಕೆ ಹೇಳಲಾಗಿದೆ.