ಹೈದರಾಬಾದ್: ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಬಿಆರ್‌ಎಸ್ ಸೋಲು ಕಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಕೆ. ಚಂದ್ರಶೇಖರ್ ರಾವ್ ರಾಜೀನಾಮೆ ನೀಡಿದರು.
ತಮ್ಮ ಸ್ವಂತ ವಾಹನದಲ್ಲಿ ರಾಜಭವನಕ್ಕೆ ತೆರಳಿದ ಕೆಸಿಆರ್ ರಾಜ್ಯಪಾಲ ತಮಿಳಿಸೈ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಎರಡು ವಿಧಾನಸಭಾ ಕ್ಷೇತ್ರಗಳಾದ ಗಜ್ವೆಲ್ ಮತ್ತು ಕಾಮರೆಡ್ಡಿ ಸ್ಪರ್ಧಿಸಿದ್ದ ಅವರು ಗಜ್ವೆಲ್‌ನಲ್ಲಿ ಮಾತ್ರ ಗೆಲುವು ಸಾಧಿಸಿದ್ದರು.























