ಮುಡಾ ಪ್ರಕರಣ: ತನಿಖೆ ಮುಂದುವರಿಸಲು ಲೋಕಾಗೆ ಕೋರ್ಟ್​ ಆದೇಶ

0
30

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಮುಡಾ ಪ್ರಕರಣದ ತನಿಖೆ ಪೂರ್ಣಗೊಳಿಸಿ, ಮೇ ೭ಕ್ಕೆ ಅಂತಿಮ ವರದಿ ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ ಬಿ ರಿಪೋರ್ಟ್ ಬಗ್ಗೆ ಸದ್ಯ ಯಾವುದೇ ಆದೇಶ ನೀಡುವುದಿಲ್ಲ ಎಂದು ಹೇಳಿದೆ.
ಲೋಕಾಯುಕ್ತ ನೀಡಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಇಡಿ ಮೇಲ್ಮನವಿಯನ್ನ ಸಲ್ಲಿಸಿದ್ದರು. ಈ ಮಧ್ಯೆ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇಡಿ ಕೂಡ ತಕರಾರು ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. ತನಿಖೆ ಮುಂದುವರೆಸಲು ಲೋಕಾಯುಕ್ತ ಪೊಲೀಸರು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದೀಗ ತನಿಖೆ ಮುಂದುವರೆಸಲು ಕೋರ್ಟ್ ಅನುಮತಿ ನೀಡಿದೆ.

Previous articleಖಾಸಗಿ ವಾಣಿಜ್ಯ ಬಂದರು ಸೇರಿದಂತೆ ಕೆಲ ಯೋಜನೆ ಬಿಡಲು ಮನವಿ
Next articleಕಲ್ಯಾಣ ಕರ್ನಾಟಕ: ಏಪ್ರಿಲ್‌ 16 ರಂದು ಬೃಹತ್‌ ಉದ್ಯೋಗ ಮೇಳ