ಶಿವಮೊಗ್ಗ: ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಬಂದಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಜಿಲ್ಲಾಡಳಿತ ನಗರ ಪ್ರವೇಶ ಮಾಡದಂತೆ ತಡೆದು, ನೋಟಿಸ್ ಕೊಟ್ಟು ವಾಪಸ್ ಕಳುಹಿಸಿತ್ತು. ಇದರ ವಿರುದ್ಧ ಮುತಾಲಿಕ್ ತಮಗೆ ಶಿವಮೊಗ್ಗ ಪ್ರವೇಶಕ್ಕೆ ಅನುಮತಿ ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದರು.
ಈ ನಡುವೆ ಹೈಕೋರ್ಟ್ ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ರಿಗೆ ಶಿವಮೊಗ್ಗ ಪ್ರವೇಶಕ್ಕೆ ಅನುಮತಿ ನೀಡಿದೆ. `ಲವ್ ಜಿಹಾದ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಶಿವಮೊಗ್ಗ ಜಿಲ್ಲೆ ಪ್ರವೇಶಿಸಲು ಅವರಿಗೆ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನರವರು ಇರುವ ಏಕಸದಸ್ಯ ಪೀಠ ಈ ಅವಕಾಶ ನೀಡಿದೆ. ಸಾರ್ವಜನಿಕ ಶಾಂತಿಗೆ ಭಂಗ ತರುವ ರೀತಿಯಲ್ಲಿ ವಿವಾದ ಮಾಡಬಾರದು ಎಂಬ ಷರತ್ತಿನೊಂದಿಗೆ ಅನುಮತಿ ನೀಡಿದೆ.