ಮುರಿದು ಬಿದ್ದ ಗರುಡ ಸ್ತಂಭ: ತಪ್ಪಿದ ಅನಾಹುತ‌

0
27

ರಾಯಚೂರು: ತಾಲೂಕಿನ ಬಿಜನಗೇರಾ ಗ್ರಾಮದಲ್ಲಿ ಭಾನುವಾರ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಅಂಗವಾಗಿ ಆಯೋಜಿಸಿದ್ದ ಗರುಡಸ್ತಂಭ ಪ್ರತಿಷ್ಠಾಪನೆ ವೇಳೆಯೇ ಮುರಿದು ಬಿದ್ದ ಘಟನೆ ನಡೆದಿದೆ.
ಗ್ರಾಮದಲ್ಲಿ ನೂತನ ದೇವಸ್ಥಾನ ಉದ್ಘಾಟನೆ ಸಮಾರಂಭ ಆಯೋಜಿಸಲಾಗಿತ್ತು. ಕಳೆದ ಮೂರು ದಿನಗಳಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗಿತ್ತು.
ಭಾನುವಾರ ಶ್ರೀ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ, ಗರುಡ ಸ್ತಂಭ ಪ್ರತಿಷ್ಠಾಪನೆ, ಗೋಪುರ ಮತ್ತು ಕಳಸ ಪೂಜೆ ಸೇರಿ ಇತ್ಯಾದಿ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಕ್ರೇನ್ ನೆರವಿನೊಂದಿಗೆ ಗರುಡಸ್ತಂಭ ನಿಲ್ಲಿಸುವಾಗ ಮುರಿದು ಬಿದ್ದಿದೆ. ಈ ವೇಳೆ ಶಾಸಕ ಡಾ. ಶಿವರಾಜ ಪಾಟೀಲ್ ಸೇರಿದಂತೆ ವಿವಿಧ ಗಣ್ಯರು, ಸ್ವಾಮೀಜಿಗಳು ಪಾಲ್ಗೊಂಡಿದ್ದರು. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Previous articleಹದಿನೆಂಟು ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್
Next articleವಕ್ಫ್ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಮಾನವ ಸರಪಳಿ