ಮುರುಘಾ ಶ್ರೀಗಳ ಮೇಲೆ ಎಫ್ಐಆರ್, ತನಿಖೆ ಬಳಿಕ ಸತ್ಯ ಹೊರ ಬೀಳಲಿದೆ: ಸಿಎಂ

0
12

ಬೆಂಗಳೂರು: ಮುರುಘಾ ಶ್ರೀಗಳ ಮೇಲೆ ಪೋಸ್ಕೊ ಅಡಿ ಎಫ್ಐಆರ್ ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ತನಿಖೆ ಮಾಡಿದ ನಂತರ ಸತ್ಯ ಹೊರಗೆ ಬರಲಿದೆ. ಇದೊಂದು ಪ್ರಮುಖ ಪ್ರಕರಣ. ಪೋಸ್ಕೊ ಪ್ರಕರಣವೂ ಆಗಿದೆ ಹಾಗೂ ಚಿತ್ರದುರ್ಗದಲ್ಲಿ ಕಿಡ್ನಾಪ್ ಪ್ರಕರಣವೂ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಾವು ಮಾತನಾಡುವುದಾಗಲಿ, ವ್ಯಾಖ್ಯಾನ ಮಾಡುವುದಾಗಲಿ ತನಿಖೆಯ ದೃಷ್ಟಿಯಿಂದ ಸರಿಯಲ್ಲ ಎಂದರು.

Previous articleಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ, ಚರ್ಚೆಯೇ ಆಗಿಲ್ಲ: ಸಿಎಂ ಬೊಮ್ಮಾಯಿ
Next articleಸದ್ಭಾವದ ಕರ್ಮಗಳೆಲ್ಲ ಪರಮ ಪಾವನ