ಮುಷ್ಕರಕ್ಕೆ ಮುಂದಾದ ಸರ್ಕಾರಿ ನೌಕರರ ವಿರುದ್ಧ ಎಸ್ಮಾ ಜಾರಿಯಿಲ್ಲ: ಸಿಎಂ

0
24
ಸಿಎಂ

ಮುಷ್ಕರ ನಡೆಸಲು ಮುಂದಾಗಿರುವ ಸರ್ಕಾರಿ ನೌಕರರ ವಿರುದ್ಧ ಎಸ್ಮಾ ಜಾರಿ ಮಾಡುವ ಚಿಂತನೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆಗಳಿದ್ದರೂ ಚರ್ಚೆ ಇಲ್ಲವೇ ಕೂತು ಮಾತುಕತೆ ಮೂಲಕ ಬಿಕ್ಕಟ್ಟನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸರ್ಕಾರ ಸಿದ್ಧವಿದೆ. ಮುಷ್ಕರ ನಡೆಸಲು ತೀರ್ಮಾನಿಸಿರುವ ನೌಕರರ ವಿರುದ್ಧ ನಾವು ಅಗತ್ಯ ಸೇವಾ ನಿರ್ವಹಣಾ ಕಾಯ್ದೆ(ಎಸ್ಮಾ) ಕಾಯ್ದೆ ಹಾಕುವಂತಹ ಕಠಿಣ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು.

Previous articleನಾಳೆಯಿಂದ ಸರಕಾರಿ ನೌಕರರ ಮುಷ್ಕರ
Next articleಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ